×
Ad

ಬಂಟಕಲ್ಲು: ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ

Update: 2018-09-27 20:17 IST

ಶಿರ್ವ, ಸೆ.27: ಬಂಟಕಲ್ಲು ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲ ಯದ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಐಎಸ್‌ಟಿಇ ಘಟಕ ಮತ್ತು ಮಂಗಳೂರು ಅಸೋಸಿಯೆಶನ್ ಆಫ್ ಸಿವಿಲ್ ಇಂಜಿನಿಯರ್ಸ್‌ ಸಹಯೋಗ ದೊಂದಿಗೆ ‘ಕಾಂಕ್ರೀಟ್ ನಿರ್ಮಾಣದ ಧಾರಣಾ ಸಾಮರ್ಥ್ಯ’ ಮತ್ತು ‘ಕಾಂಕ್ರೀಟ್ ತಂತ್ರಜ್ಞಾನದಲ್ಲಿ ಪ್ರಗತಿಗಳು’ ಎಂಬ ವಿಷಯಗಳ ಕುರಿತು ತಾಂತ್ರಿಕ ಉಪನ್ಯಾಸವನ್ನು ಇಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಸುರತ್ಕಲ್ ಎನ್‌ಐಟಿಕೆಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾ ಪಕ ಡಾ.ಎಂ.ಸಿ.ನರಸಿಂಹನ್ ಮತ್ತು ಮಂಗಳೂರು ಎನಪೋಯ ತಾಂತ್ರಿಕ ವಿದ್ಯಾಲಯದ ಪ್ರಾಂಶುಪಾಲ ಡಾ.ರಾಜೇಶ್ ಡಿಸೋಜ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಉಪಸ್ಥಿತರಿದ್ದರು.

ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಆನಂದ್ ವಿ.ಆರ್. ಸ್ವಾಗತಿಸಿದರು. ಸಹಾಯಕ ಉಪನ್ಯಾಸಕ ಸೂರಜ್ ಕುಮಾರ್ ವಂದಿಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಜಯಪ್ರದಾ ಬೇಕಲ್ ಕಾರ್ಯಕ್ರಮ ನಿರೂಪಿಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ 125ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News