ಶಿರಾಡಿ ಘಾಟ್‌ನಲ್ಲಿ ಶೀಘ್ರ ಪ್ರಯಾಣಿಕ ವಾಹನಗಳಿಗೆ ಅನುಮತಿ: ಸಚಿವ ಖಾದರ್
Update: 2018-09-27 22:15 IST
ಮಂಗಳೂರು, ಸೆ. 27: ಇನ್ನು ಒಂದೆರಡು ದಿನಗಳ ಒಳಗಾಗಿ ಶಿರಾಡಿ ಘಾಟಿ ಮಾರ್ಗವಾಗಿ ಪ್ರಯಾಣಿಕ ವಾಹನಗಳಿಗೆ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯ ಜಿಲ್ಲಾ ಅಧಿಕಾರಿಗಳು ಹಾಗೂ ಹಾಸನ ಜಿಲ್ಲೆಯ ಜಿಲ್ಲಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.
ಇದೇ ರೀತಿ ಮುಂದಿನ 15 ದಿನಗಳೂಳಗಾಗಿ ಸುಳ್ಯ ಸಂಪಾಜೆ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಕಾಮಗಾರಿಯನ್ನು ನಡೆಸಲು ಅಗತ್ಯವಾದ ಕ್ರಮಗಳನ್ನು ಕೈಗೊಂಡಿರುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.