ಪರಿಶಿಷ್ಟರ ಮುಂಭಡ್ತಿ ಮೀಸಲಾತಿ: ಅ.3ರ ತೀರ್ಪು ನೋಡಿಕೊಂಡು ಮುಂದಿನ ಕ್ರಮ; ಸಚಿವ ಕೃಷ್ಣಭೈರೇಗೌಡ

Update: 2018-09-27 16:46 GMT

 ಬೆಂಗಳೂರು, ಸೆ. 27: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ)ದ ಅಧಿಕಾರಿಗಳು ಮತ್ತು ನೌಕರರ ಭಡ್ತಿ ಮೀಸಲಾತಿ ಸಂಬಂಧ ಅಕ್ಟೋಬರ್ 3ಕ್ಕೆ ಸುಪ್ರಿಂ ಕೋರ್ಟ್ ಮುಂದಿರುವ ಪ್ರಕರಣದ ತೀರ್ಪು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿನ್ನೆ ಎಂ.ನಾಗರಾಜು ಅವರ ಪ್ರಕರಣದಲ್ಲಿ ಬಂದಿರುವ ತೀರ್ಪಿನ ಪ್ರತಿ ಅಧ್ಯಯನ ಮಾಡಲಾಗುತ್ತಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಜತೆಗೂ ಚರ್ಚಿಸಿದ್ದೇನೆ. ಮುಂಭಡ್ತಿ ಮೀಸಲಾತಿ ಸಂಬಂಧ ಅ.3ಕ್ಕೆ ಬಿ.ಕೆ.ಪವಿತ್ರ ಪ್ರಕರಣ ವಿಚಾರಣೆಗೆ ಬರಲಿದೆ. ಆ ನಂತರ ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ರಾಜ್ಯ ಸರಕಾರದ ಕಾಯ್ದೆಗೆ ನಿರ್ಬಂಧ ಹೇರದಿರಲು ಕೋರ್ಟ್‌ಗೆ ಮನವಿ ಮಾಡಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News