ಗಾಂಧೀಜಿಯ ಸಿದ್ಧಾಂತದ ಮೇಲೆ ಪ್ರಧಾನಿ ಮೋದಿಗೆ ಯಾವುದೇ ನಂಬಿಕೆ ಇಲ್ಲ: ದಿನೇಶ್ ಗುಂಡೂರಾವ್

Update: 2018-09-28 14:26 GMT

ಬೆಂಗಳೂರು, ಸೆ. 28: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರಧಾನಿ ಮೋದಿ ಗಾಳಿಗೆ ತೂರಿದ್ದಾರೆ. ಅವರ ಜನ್ಮ ದಿನದಂದು ಕೇವಲ ಕಸ ಗುಡಿಸುವುದಲ್ಲ, ಮನಸ್ಸನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಸಿದ್ಧಾಂತದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವುದೇ ನಂಬಿಕೆ ಇಲ್ಲ. ಹೀಗಾಗಿ ಅವರ ವಿರುದ್ಧ, ಗಾಂಧಿ ತತ್ವದ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಹೇಳಿದರು.

ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಜಯಂತಿ ಆಚರಣೆ ಮಾಡುವ ಮೂಲಕ ಅವರ ತತ್ವಗಳನ್ನು ಪಸರಿಸುವ ಕೆಲಸವನ್ನು ನಾವು ಮಾಡುತ್ತೇವೆ. ಆದರೆ, ಇಂದು ದೇಶದಲ್ಲಿ ಹಿಂಸಾತ್ಮಕ ಘಟನೆಗಳು ಹೆಚ್ಚಾಗಿ ನಡೆಯುತಿದ್ದು, ಅದರ ವಿರುದ್ಧ ಹೋರಾಡಲು ನಾವು ಮುಂದಾಗುತ್ತೇವೆ ಎಂದು ದಿನೇಶ್‌ ಗುಂಡೂರಾವ್ ನುಡಿದರು.

ಅ.10ಕ್ಕೆ ಸಂಪುಟ ವಿಸ್ತರಣೆ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಅಕ್ಟೋಬರ್ 10ರಂದು ನಡೆಯಲಿದ್ದು, ಅದೇ ವೇಳೆಗೆ ನಿಗಮ-ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕವೂ ನಡೆಯಲಿದೆ. ಈ ಬಗ್ಗೆ ಯಾರೊಬ್ಬರಿಗೂ ಸಂಶಯಬೇಡ.

-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News