ಸೆ. 29: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜು ವ್ಯತ್ಯಯ
Update: 2018-09-28 20:38 IST
ಉಡುಪಿ, ಸೆ.28: ಉಡುಪಿ ನಗರಸಭೆಗೆ ಕುಡಿಯುವ ನೀರು ಪೂರೈಕೆ ಮಾಡುವ ನೀರು ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವ ಮೆಸ್ಕಾಂ ವಿದ್ಯುತ್ ಜಾಲಕ್ಕೆ ಮರ ಬಿದ್ದು ಅಡಚಣೆ ಉಂಟಾಗಿದ್ದು, ಘಟಕಕ್ಕೆ ನೀರು ಪೂರೈಕೆ ಸ್ಥಗಿತಗೊಂಡಿದೆ.
ಹೀಗಾಗಿ ಸೆ.29ರಂದು ಉಡುಪಿ ನಗರಸಭೆಯ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಸಂಭವವಿದೆ. ಆದುದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕೆಂದು ಉಡುಪಿ ನಗರಸಭೆಯ ಪೌರಾಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.