ಸೆ.30: ವಿಶ್ವೇಶ್ವರಯ್ಯ ಜಯಂತಿ ಪ್ರತಿಭಾ ಪುರಸ್ಕಾರ
Update: 2018-09-28 22:40 IST
ಬೆಂಗಳೂರು, ಸೆ.28: ವಿ.ಸೋಮಣ್ಣ ಪ್ರತಿಷ್ಠಾನ ವತಿಯಿಂದ ಸೆ.30ರಂದು ವಿಜಯನಗರದ ಕಾಸಿಯಾ ಸಭಾಂಗಣದಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ.
ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಸಮಾರಂಭ ಉದ್ಘಾಟಿಸಲಿದ್ದು, ಮಾಜಿ ಸಚಿವ ಹಾಗೂ ಶಾಸಕ ವಿ.ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್ ಹಾಗೂ ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ಸೋಮಣ್ಣ ಆಗಮಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.