×
Ad

ಸಾಲಿಗ್ರಾಮ ಪ.ಪಂ.ನಲ್ಲಿ ಪೌರಕಾರ್ಮಿಕ ದಿನಾಚರಣೆ

Update: 2018-09-28 22:44 IST

ಉಡುಪಿ, ಸೆ.28: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ಪೌರಕಾರ್ಮಿಕ ದಿನಾಚರಣೆ ಇತ್ತೀಚೆಗೆ ನಡೆಯಿತು. ಪ.ಪಂ.ನ ಮುಖ್ಯಾಧಿಕಾರಿ ಆರ್. ಶ್ರೀಪಾದ್ ಇವರು ಹಗ್ಗಜಗ್ಗಾಟ ಸ್ಪರ್ಧೆಗೆ ಸೀಟಿ ಊದುವ ಮೂಲಕ ಇದಕ್ಕೆ ಚಾಲನೆ ನೀಡಿದರು.

ಬಳಿಕ ಪೌರಕಾರ್ಮಿಕರಿಗೆ ವಿವಿಧ ಒಳಾಂಗಣ ಹಾಗೂ ಹೊರಾಂಗಣ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಕೊನೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಆಡಳಿತಾಧಿಕಾರಿ ಅನಿಲ್ ಕುಮಾರ್ ಭಾಗವಹಿಸಿದ್ದರು. ಮುಖ್ಯಾಧಿಕಾರಿ ಶ್ರೀಪಾದ್ ಪೌರಕಾರ್ಮಿಕರಿಗೆ ಇರುವ ಸೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮವನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ನಿರೂಪಿಸಿದರು. ಕೆ.ಚಂದ್ರಶೇಖರ ಸೋಮಯಾಜಿ ಸ್ವಾಗತಿಸಿ, ವಂದಿಸಿದರು.

ಕಾರ್ಯಕ್ರಮವನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ನಿರೂಪಿಸಿದರು. ಕೆ.ಚಂದ್ರಶೇಖರ ಸೋಮಯಾಜಿ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News