ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: 2 ಸಾಕ್ಷಿ ವಿಚಾರಣೆ
Update: 2018-09-28 23:17 IST
ಉಡುಪಿ, ಸೆ. 28: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಇಬ್ಬರು ಸಾಕ್ಷಿಗಳ ವಿಚಾರಣೆ ನಡೆಯಿತು.
ಪ್ರಕರಣದಲ್ಲಿ ಈವರೆಗೆ ಒಟ್ಟು 31 ಸಾಕ್ಷಿಗಳ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆ ಅ. 3,4,5 ಮತ್ತು 10 ರಂದು ನಿಗಧಿಪಡಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆಗಮಿಸಿ ಸಾಕ್ಷ್ಯ ನುಡಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.