ಬ್ಯಾಪ್ಟಿಸ್ಟ್ ಆಸ್ಪತ್ರೆ ಸೇರಿ ರಾಜ್ಯಕ್ಕೆ ನಾಲ್ಕು ರಾಷ್ಟ್ರ ಪ್ರಶಸ್ತಿ
ಬೆಂಗಳೂರು, ಸೆ. 29: 2018ನೆ ಸಾಲಿನ ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿರುವ ಹಿರಿಯ ನಾಗರಿಕರಿಗೆ ನೀಡಲಾಗುವ ಕೇಂದ್ರ ಸರಕಾರ ರಾಷ್ಟ್ರ ಪ್ರಶಸ್ತಿಗಳಿಗೆ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆ ಸೇರಿ ಎರಡು ಸಂಸ್ಥೆ ಮತ್ತು ಇಬ್ಬರು ಆಯ್ಕೆಯಾಗಿದ್ದು, ಅವರೆಲ್ಲರಿಗೂ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅಭಿನಂದನೆ ಸಲ್ಲಿಸಿದ್ದಾರೆ.
ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬ್ಯಾಪ್ಟಿಸ್ಟ್ ಆಸ್ಪತ್ರೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಾದರಿ ತಾಯಿ ಪ್ರಶಸ್ತಿಗೆ ತುಮಕೂರು ಜಿಲ್ಲೆಯ ಮುನಿಯಮ್ಮ ಹಾಗೂ ಸೃಜನಶೀಲ ಕಲೆ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆಯ ನಾಡೋಜ ಬೆಳಗಲ್ಲು ವೀರಣ್ಣ ಆಯ್ಕೆಯಾಗಿದ್ದಾರೆ.
ಮೇಲ್ಕಂಡ ಎರಡು ಸಂಸ್ಥೆಗಳು ಸಹಿತ ರಾಜ್ಯಕ್ಕೆ ನಾಲ್ಕು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ಬಂದಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದ್ದು, ಈ ಪ್ರಶಸ್ತಿ ಪುರಸ್ಕೃತ ಮಹನೀಯರಿಗೆ ಹಾಗೂ ಸಂಸ್ಥೆಗಳಿಗೆ ಅಭಿನಂದನೆಗಳು ಎಂದು ಸಚಿವೆ ಜಯಮಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.