×
Ad

ಮೈಸೂರು ದಸರಾ: ಕನ್ನಡ ಪುಸ್ತಕ ಮಾರಾಟ ಮೇಳ

Update: 2018-09-29 20:32 IST

ಮಂಗಳೂರು, ಸೆ.29:  ಮೈಸೂರು ದಸರಾ ಉತ್ಸವ-2018ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಅ. 10ರಿಂದ 19ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಮೈಸೂರಿನ ಕಾಡಾ ಮೈದಾನದಲ್ಲಿ ಏರ್ಪಡಿಸಲಾಗಿದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 2,000 ರೂ. ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು- ಅವರ ಹೆಸರಿನಲ್ಲಿ ಸಲ್ಲಿಸುವುದು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com  ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ ಬೆಂಗಳೂರು-560002 ದೂ.ಸಂ.:080-22484516/22107704ನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News