×
Ad

ಬೀದಿ ನಾಟಕ ಸ್ಪರ್ಧೆ: ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿಗೆ ಪ್ರಶಸ್ತಿ

Update: 2018-09-29 21:16 IST

ಉಡುಪಿ, ಸೆ.29: ಉಡುಪಿ ಎಂಜಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕ ಒಂದು ಮತ್ತು ಎರಡರ ವತಿಯಿಂದ ಕಾಲೇಜಿನ ಗೀತಾಂಜಲಿ ಹಾಲ್‌ನಲ್ಲಿ ಶನಿವಾರ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಅಂತರ್ ಕಾಲೇಜು ಮಟ್ಟದ ಬೀದಿ ನಾಟಕ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಇದೇ ವಿಭಾಗದಲ್ಲಿ ಸುರತ್ಕಲ್ ಗೋವಿಂದಾಸ್ ಕಾಲೇಜು ದ್ವಿತೀಯ ಹಾಗೂ ಕಲ್ಯಾಣಪುರ ಮಿಲಾಗ್ರೀಸ್ ಕಾಲೇಜು ತೃತೀಯ ಬಹುಮಾನ ಪಡೆದು ಕೊಂಡವು. ಛಾಯಾಗ್ರಹಣ ಸ್ಪರ್ಧೆಯಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಪ್ರಥಮ, ಕುಂದಾಪುರ ಭಂಡಾರ್ಕರ್ಸ್‌ ಕಾಲೇಜು ದ್ವಿತೀಯ ಹಾಗೂ ಸುರತ್ಕಲ್ ಗೋವಿಂದಾಸ್ ತೃತೀಯ ಬಹುಮಾನವನ್ನು ತನ್ನದಾಗಿಸಿಕೊಂಡವು. ಈ ಸ್ಪರ್ಧೆ ಯಲ್ಲಿ ಒಟ್ಟು 9 ತಂಡಗಳು ಭಾಗವಹಿಸಿದ್ದವು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಅಧ್ಯಕ್ಷತೆಯನ್ನು ಮಣಿಪಾಲ ಅಕಾ ಡೆಮಿ ಆಫ್ ಜನರಲ್ ಎಜುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾ ರಾಮ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ್ ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಪ್ರಿಯಾಶ್ರೀ ಕೆ.ಟಿ. ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News