ಮೂಡುಬಿದಿರೆ: ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪಿ ಪೊಲೀಸ್ ವಶ
Update: 2018-09-29 21:30 IST
ಮೂಡುಬಿದಿರೆ, ಸೆ. 29: ಒಬ್ಬಂಟಿ ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕ್‍ನಲ್ಲಿ ಬಂದು ಅಡ್ಡಗಟ್ಟಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಸಾರ್ವಜನಿಕರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಇರುವೈಲ್ ಎಂಬಲ್ಲಿ ನಡೆದಿದೆ.
ಅಳಿಯೂರಿನ ಪ್ರಶಾಂತ್ ಬಂಧಿತ ಆರೋಪಿ. ಈತ ಇರುವೈಲ್ ಪ್ರದೇಶದಲ್ಲಿ ಕಳೆದ ಹಲವು ಸಮಯದಿಂದ ಮುಖ್ಯರಸ್ತೆ ಮತ್ತು ಒಳರಸ್ತೆಗಳಲ್ಲಿ ಒಂಟಿಯಾಗಿ ತಿರುಗಾಡುತ್ತಿದ್ದ ಮಹಿಳೆಯರ ಬಳಿ ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಸ್ಥಳೀಯರು ಮೂಡುಬಿದ್ರೆ ಪೊಲೀಸರಿಗೆ ದೂರು ನೀಡಿದ್ದು, ಕಾರ್ಯಾಚರಣೆಯಲ್ಲಿ ಪೊಲೀಸರೂ ಸ್ಥಳೀಯರೊಂದಿಗೆ ಭಾಗಿಯಾಗಿದ್ದರು. ಪೊಲೀಸ್ ಠಾಣೆಯಲ್ಲಿ ವಿಚಾರಣೆ ವೇಳೆ ಆರೋಪಿ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.