ಕುತ್ತಾರು: ಸರಣಿ ಅಪಘಾತ; ಸಂಪೂರ್ಣ ಜಖಂಗೊಂಡ ಕಾರು
Update: 2018-09-29 22:12 IST
ಮಂಗಳೂರು, ಸೆ.29: ಕಾರು-ಸ್ಕೂಟರ್-ಕಾರುಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಕಾರೊಂದು ಸಂಪೂರ್ಣ ನಜ್ಜುಗುಜ್ಜಾದ ಘಟನೆ ನಗರದ ಹೊರವಲಯ ಕುತ್ತಾರಿನ ಪಂಡಿತ್ ಹೌಸ್ ಬಳಿ ಶನಿವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕೇರಳ ಮೂಲದ ವಿದ್ಯಾರ್ಥಿಗಳು ಪಾನಮತ್ತರಾಗಿ, ಅತಿವೇಗದಲ್ಲಿ ಕಾರನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ. ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದು ಬಳಿಕ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಕಾರಿನಲ್ಲಿ ಇಬ್ಬರು ಯುವಕರು, ಇಬ್ಬರು ಯುವತಿಯರು ಇದ್ದರು.
ಈ ಬಗ್ಗೆ ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.