×
Ad

ಅ. 2: ಬ್ರಾಂಡ್ ಮಂಗಳೂರು ಫ್ರೆಂಡ್‌ಶಿಪ್ ಕ್ರಿಕೆಟ್ ಪಂದ್ಯಾವಳಿ

Update: 2018-09-29 22:45 IST

ಮಂಗಳೂರು, ಸೆ.29: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಅಕ್ಟೋಬರ್ 2 ಬ್ರಾಂಡ್ ಮಂಗಳೂರು ಫ್ರೆಂಡ್‌ಶಿಪ್ ಕ್ರಿಕೆಟ್ ಪಂದ್ಯವಾಳಿ 2018 ಆಯೋಜಿಸಲಾಗಿದೆ. ನಗರದ ಹೊರವಲಯ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.

ಉದ್ಘಾಟನಾ ಕಾರ್ಯಕ್ರಮ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ್ ಭಂಡಾರಿ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News