ತಾಂತ್ರಿಕ ದೋಷ: ಜೆಟ್ ಏರ್‌ವೇಸ್ ವಿಮಾನ ತುರ್ತು ಭೂಸ್ಪರ್ಶ

Update: 2018-09-30 13:33 GMT

ಇಂದೋರ್, ಸೆ.30: ಜೆಟ್ ಏರ್‌ವೇಸ್‌ನ ವಿಮಾನವೊಂದು ಇಂದೋರ್ ವಿಮಾನನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 96 ಪ್ರಯಾಣಿಕರಿದ್ದ ಜೆಟ್ ಏರ್‌ವೇಸ್ ವಿಮಾನ ಹೈದರಾಬಾದ್‌ನತ್ತ ಸಂಚರಿಸುತ್ತಿತ್ತು. ಈ ಸಂದರ್ಭ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 4ರಂದು ಮುಂಬೈಯಿಂದ ದಿಲ್ಲಿಗೆ 100 ಪ್ರಯಾಣಿಕರನ್ನು ಸಾಗಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಕ್ಯಾಬಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News