ಬೆಂಗಳೂರು: ನೇಣು ಬಿಗಿದು ನವವಿವಾಹಿತೆ ಆತ್ಮಹತ್ಯೆ
Update: 2018-09-30 19:06 IST
ಬೆಂಗಳೂರು, ಸೆ.30: ನವವಿವಾಹಿತೆಯೊಬ್ಬರು ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ನಂದಿನಿಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಿನಿಲೇಔಟ್‌ನ ನಿವಾಸಿ ಸುರೇಶ್ ಎಂಬವರ ಪತ್ನಿ ಪ್ರೇಮಾ (25) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಗಾರ್ಮೆಂಟ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುವ ಸುರೇಶ್ ಮೂರು ತಿಂಗಳ ಹಿಂದೆಯಷ್ಟೇ ಪ್ರೇಮಾ ಅವರನ್ನು ಮದುವೆಯಾಗಿದ್ದರು. ಪ್ರೇಮಾ ಗೃಹಿಣಿಯಾಗಿದ್ದರು. ಶನಿವಾರ ಬೆಳಗ್ಗೆ ಪ್ರೇಮಾ ಅವರು ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಷ್ಟು ಹೊತ್ತಾದರೂ ಪ್ರೇಮಾ ಕೊಠಡಿಯಿಂದ ಹೊರಬಾರದಿದ್ದಾಗ ಮನೆಯವರು ಕೊಠಡಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ನಂದಿನಿಲೇಔಟ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.