ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ
Update: 2018-09-30 19:07 IST
ಬೆಂಗಳೂರು, ಸೆ.30: ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯನಗರದ ವಿನಾಯಕಲೇಔಟ್ ನಿವಾಸಿ ಸಿಂಧು (31) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.
7 ವರ್ಷಗಳ ಹಿಂದೆ ಅವಿನಾಶ್ ಅವರನ್ನು ಮದುವೆಯಾಗಿದ್ದ ಸಿಂಧು ಶನಿವಾರ ಮಧ್ಯಾಹ್ನ ಮನೆಯಲ್ಲೇ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೆಲಸಕ್ಕೆ ಹೋಗಿದ್ದ ಅವಿನಾಶ್ ಪತ್ನಿಗೆ ಮೊಬೈಲ್ ಕರೆ ಮಾಡಿದಾಗ ಅವರು ಕರೆಸ್ವೀಕರಿಸಿರಲಿಲ್ಲ. ಸಂಜೆ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಇಬ್ಬರೂ ಮೈಸೂರು ಮೂಲದವರಾಗಿದ್ದು, ದಂಪತಿ ಮಧ್ಯೆ ಆಗಾಗ್ಗ ಜಗಳ ಉಂಟಾಗುತ್ತಿತ್ತು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.