×
Ad

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ

Update: 2018-09-30 20:30 IST

ಬಂಟ್ವಾಳ, ಸೆ.30: ನಾಪತ್ತೆಯಾಗಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮೃತದೇಹವು ನೆಕ್ಕಿಲಾಡಿಯ ಗುಡ್ಡೆಯಲ್ಲಿ ರವಿವಾರ ಪತ್ತೆಯಾಗಿದೆ.

ಮೂಡುಪಡುಕೋಡಿ ಗ್ರಾಮದ ಎರ್ಮೆನಾಡು ನಿವಾಸಿ ಕೊರಗ ನಾಯ್ಕ ಅವರ ಪುತ್ರ ರಾಜೇಶ (31) ಆತ್ಮಹತ್ಯೆ ಮಾಡಿಕೊಂಡವರು.

ರಾಜೇಶ ಸೆಂಟ್ರಿಂಗ್ ಕಾರ್ಮಿಕನಾಗಿದ್ದು, ಕಳೆದ 5 ತಿಂಗಳಿನಿಂದ ಉಪ್ಪಿನಂಗಡಿ, ನೆಕ್ಕಿಲಾಡಿಯ ತನ್ನ ಅಜ್ಜಿ ಮನೆಯಲ್ಲಿ ವಾಸವಾಗಿದ್ದ. ಈತ ಸೆ. 27ರಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ನಾಪತ್ತೆಯಾದ ದಿನದಂದು ರಾಜೇಶ್ ತನ್ನ ಸಂಬಂಧಿಕರಿಗೆ ಕರೆ ಮಾಡಿ ಇನ್ನು ನಾನು ಸಿಗುವುದಿಲ್ಲ ಎಂದು ತಿಳಿಸಿದ್ದ ಎನ್ನಲಾಗಿದೆ. ಮನೆ ಮಂದಿ ಹಾಗೂ ಸ್ಥಳೀಯರು ಮನೆ ಸಮೀಪದ ಗುಡ್ಡದಲ್ಲಿ ಹುಡುಕಾಡಿದಾಗ ರಾಜೇಶನ ಮೃತದೇಹ ಪತ್ತೆಯಾಗಿದೆ. ಆತ ಮೂರುದಿನಗಳ ಹಿಂದೆಯೇ ವಿಷ ಪದಾರ್ಥ ಸೇವಿಸಿ ಮೃತಪಟ್ಟಿರಬೇಕೆಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ರಾಜೇಶ ಅವಿವಾಹಿತನಾಗಿದ್ದು, ತಂದೆ, ತಾಯಿ, ಸಹೋದರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಸಹೋದರ ಲೋಕೇಶ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News