ಬೆಂಗಳೂರು: ಸೆ.1ರಂದು ‘ನಮ್ಮೊಳಗಿನ ಗಾಂಧಿ’ ಸಂವಾದ ಕಾರ್ಯಕ್ರಮ
Update: 2018-09-30 22:55 IST
ಬೆಂಗಳೂರು, ಸೆ. 30: ರಾಷ್ಟ್ರಪಿತ ಮಹತ್ಮಾ ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ನಾಳೆ(ಸೆ.1) ಸೆಂಟ್ರಲ್ ಕಾಲೇಜ್ ಆವರಣದಲ್ಲಿರುವ ಸೆನೆಟ್ ಹಾಲ್‌ನಲ್ಲಿ ‘ನಮ್ಮೊಳಗಿನ ಗಾಂಧಿ’ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.
ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಜಾಫೆಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಬೆಂಗಳೂರು ಕೇಂದ್ರ ವಿವಿ ಕುಲಸಚಿವ ಪ್ರೊ.ಎಂ.ರಾಮಚಂದ್ರಗೌಡ, ಹಾಗೂ ಕುಲಸಚಿವ(ವೌಲ್ಯಮಾಪನ) ಪ್ರೊಲಿಂಗರಾಜ ಗಾಂಧಿ ಉಪಸ್ಥಿತರಿರಲಿದ್ದಾರೆಂದು ಪ್ರಕಟನೆ ತಿಳಿಸಿದೆ.