×
Ad

ದಲೈಲಾಮಾ ಹತ್ಯೆಗೆ ಸಂಚು: ವರದಿ ಕೇಳಿದ ಕೇಂದ್ರ ಗೃಹ ಇಲಾಖೆ

Update: 2018-10-01 20:43 IST

ಬೆಂಗಳೂರು, ಅ.1: ಬೌದ್ದ ಧರ್ಮ ಗುರು ದಲೈಲಾಮಾ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಪ್ರಕರಣವೊಂದು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಮೂಲಕ ಬೆಳಕಿಗೆ ಬಂದಿದ್ದು, ಈ ಸಂಬಂಧ ವರದಿ ನೀಡಲು ಕೇಂದ್ರ ಗೃಹ ಇಲಾಖೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಕೇಂದ್ರ ಗೃಹ ಖಾತೆ ಸಚಿವ ರಾಜ್‌ನಾಥ್ ಸಿಂಗ್, ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಹಾಗೂ ಗುಪ್ತಚರ ಇಲಾಖೆಯ ಮುಖ್ಯಸ್ಥರಿಗೆ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಮನಗರದಲ್ಲಿ ಬಂಧಿತನಾಗಿದ್ದ ವ್ಯಕ್ತಿಯು ಎನ್‌ಐಎ ವಿಚಾರಣೆ ವೇಳೆ ಮಾಹಿತಿ ಬಿಚ್ಚಿಟ್ಟಿದ್ದಾನೆ. ಬೌದ್ಧ ಧರ್ಮಗುರು ದಲೈಲಾಮಾ ಅವರು ರೋಹಿಂಗ್ಯಾಗಳಿಗೆ ವಿರೋಧಿಯಾಗಿದ್ದರು. ಆದ್ದರಿಂದ ಜೆಎಂಬಿ ಉಗ್ರ ಸಂಘಟನೆ ಹತ್ಯೆಗೆ ಸಂಚು ರೂಪಿಸಿತ್ತು ಎಂಬ ಮಾಹಿತಿ ತಿಳಿಸಿದ್ದಾನೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News