×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-10-01 22:00 IST

ಕಾರ್ಕಳ, ಅ.1: ನಿಟ್ಟೆ ಗ್ರಾಮದ ಕಲಂಬಾಡಿ ಪದವು ನಿವಾಸಿ ರಾಜೇಂದ್ರ ಎಂಬವರ ಮಗಳು ಮೇಘಲಾ(39) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಅ.1ರಂದು ಬೆಳಗ್ಗೆ 9.30ರ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಮನೆಯಲ್ಲಿ ಅಡುಗೆ ಮಾಡುವ ವಿಚಾರದಲ್ಲಿ ಗಲಾಟೆ ಮಾಡಿ ಮನೆಯಿಂದ ಹೋದ ಬೈಂದೂರು ಗ್ರಾಮದ ಬಾಡ ನಿವಾಸಿ ಗಣಪತಿ ಶೇರುಗಾರ(48) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.29ರ ಸಂಜೆ ಯಿಂದ ಅ.1ರ ಬೆಳಗಿನ ಮಧ್ಯಾವಧಿಯಲ್ಲಿ ತೆಗ್ಗರ್ಸೆ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News