×
Ad

ಅತ್ಯಾಚಾರ ಆರೋಪ: ಸ್ವಯಂಘೋಷಿತ ದೇವಮಾನವ ಡಾಟಿ ಮಹಾರಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Update: 2018-10-01 22:06 IST

ಹೊಸದಿಲ್ಲಿ, ಅ.1: ಸ್ವಯಂಘೋಷಿತ ದೇವಮಾನವ ಡಾಟಿ ಮಹಾರಾಜ್ ವಿರುದ್ಧದ ಅತ್ಯಾಚಾರ ಪ್ರಕರದಲ್ಲಿ ದಿಲ್ಲಿ ಪೊಲೀಸ್ ಕ್ರೈಂ ಬ್ರಾಂಚ್ ಸೋಮವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಜೂನ್ 11ರಂದು ಡಾಟಿ ಮಹಾರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿ 3 ತಿಂಗಳ ನಂತರ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಐಪಿಸಿ ಸೆಕ್ಷನ್ 376, 377ರಡಿ ದಿಲ್ಲಿಯ ಸಾಕೇತ್ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ. ತನ್ನ ಮಾಜಿ ಅನುಯಾಯಿ 25 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಗೈದ ಆರೋಪ ಡಾಟಿ ಮಹಾರಾಜ್ ಮೇಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News