ಒಬಿಸಿ ಪಟ್ಟಿಯಲ್ಲಿ ಮುಸ್ಲಿಂ ಉಪಜಾತಿಗಳ ಸೇರ್ಪಡೆ ವಿಚಾರ: ಆಕ್ಷೇಪಣೆ ಸಲ್ಲಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

Update: 2018-10-01 16:49 GMT

ಬೆಂಗಳೂರು, ಅ.1: ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಮುಸ್ಲಿಂ ಜನಾಂಗದ ಎಲ್ಲ ಉಪಜಾತಿಗಳನ್ನು ಸೇರ್ಪಡೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಆದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ಈ ಸಂಬಂಧ ಮೊಹಮ್ಮದ್ ಅರೀಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿತು.

ರಾಜ್ಯ ಸರಕಾರ 2 ಬಿ ಪಟ್ಟಿಯಲ್ಲಿ ಮುಸ್ಲಿಂ ಧರ್ಮದ 17 ಉಪಜಾತಿಗಳನ್ನು ಸೇರಿಸಿದೆ. ಅಲ್ಲದೆ, ಕೇಂದ್ರ ಸರಕಾರದ ಒಬಿಸಿ ಪಟ್ಟಿಯಲ್ಲಿ ಈ ಎಲ್ಲ ಉಪಜಾತಿಗಳನ್ನೂ ಸೇರಿಸಿಲ್ಲ ಎಂದು ಅರ್ಜಿದಾರರು  ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News