×
Ad

ರಾಜಕೀಯ ವೈಷಮ್ಯ: ಮೂವರ ಮೇಲೆ ಮಾರಣಾಂತಿಕ ಹಲ್ಲೆ

Update: 2018-10-01 23:35 IST

ಮಂಡ್ಯ, ಅ.1: ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕು ಹುಳ್ಳೇನಹಳ್ಳಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.

ಮಹಾಲಿಂಗ(60) ಸಂತೋಷ(35) ಹಾಗೂ ಮನೋಹರ್(31) ಹಲ್ಲೆಗೊಳಗಾದವರಾಗಿದ್ದು, ಇವರನ್ನು ಜಿಲ್ಲಾಸ್ಪತ್ರೆಗೆ (ಮಿಮ್ಸ್) ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮೀನು ವಿಚಾರವಾಗಿ ಮಧ್ಯಸ್ಥಿಕೆ ನಡೆಸಲು  ಬಂದಾಗ, ಚುನಾವಣಾ ದ್ವೇಷ ಹಿನ್ನೆಲೆಯಲ್ಲಿ ನಮ್ಮ ಮೇಲೆ ಹಲ್ಲೆ ನಡೆಯಿತು ಎಂದು ಹಲ್ಲೆಗೊಳಗಾದವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಅದೇ ಗ್ರಾಮದ ದೊಳ್ಳೇಗೌಡ, ನಾಗ, ರಾಜ, ಇತರರು ಏಕಾಏಕಿ ಬಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿದರು ಎಂದು ಅವರು ದೂರಿನಲ್ಲಿ ತಿಳಿಸಿದ್ದು, ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News