ಗಾಂಧಿ ಗ್ರಾಮ ಪುರಸ್ಕಾರಕ್ಕೆ 176 ಗ್ರಾ.ಪಂ.ಗಳ ಆಯ್ಕೆ

Update: 2018-10-02 13:24 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.2: ರಾಜ್ಯ ಸರಕಾರವು 2017-18ನೆ ಸಾಲಿಗೆ 30 ಜಿಲ್ಲೆಗಳ 176 ಗ್ರಾಮ ಪಂಚಾಯಿತಿಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ದೊಮ್ಮಸಂದ್ರ, ಬೆಂಗಳೂರು ಉತ್ತರ ತಾಲೂಕಿನ ದೊಡ್ಡಜಾಲ, ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ, ಬೆಂಗಳೂರು ಪೂರ್ವ ತಾಲೂಕಿನ ಕಣ್ಣೂರು ಗ್ರಾಮ ಪಂಚಾಯತ್.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ, ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ, ಹೊಸಕೋಟೆ ತಾಲೂಕಿನ ಸೂಲಿಬೆಲೆ, ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮ ಪಂಚಾಯತ್.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಬಂಟ್ವಾಳ ತಾಲೂಕಿನ ಬಾಳ್ತಿಲ, ಮಂಗಳೂರು ತಾಲೂಕಿನ ಬೆಳುವಾಯಿ, ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ, ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ, ಕುಂದಾಪುರ ತಾಲೂಕಿನ ಹೊಸಾಡು, ಉಡುಪಿ ತಾಲೂಕಿನ ಕಾಡೂರು ಗ್ರಾಮ ಪಂಚಾಯತ್.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ, ಗುಬ್ಬಿ ತಾಲೂಕಿನ ಎಂ.ಎಚ್.ಪಟ್ಟಣ, ಕೊರಟಗೆರೆ ತಾಲೂಕಿನ ತಂಬಾಡಿ, ಕುಣಿಗಲ್ ತಾಲೂಕಿನ ಹೇರೂರು, ಮಧುಗಿರಿ ತಾಲೂಕಿನ ಮರುವೇಕೆರೆ, ಪಾವಗಡ ತಾಲೂಕಿನ ಕೋಟಗುಡ್ಡ, ಶಿರಾ ತಾಲೂಕಿನ ಚಿಕ್ಕನಹಳ್ಳಿ, ತಿಪಟೂರು ತಾಲೂಕಿನ ಅರಳಗುಪ್ಪೆ, ತುಮಕೂರು ತಾಲೂಕಿನ ಪಾಲಸಂದ್ರ, ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯತ್.

ಇದಲ್ಲದೆ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಹಾಸನ, ಹಾವೇರಿ, ಕೊಡಗು, ಕೋಲಾರ,ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯ ಗ್ರಾಮ ಪಂಚಾಯತ್ ಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News