ಬೆಂಗಳೂರು: 4 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

Update: 2018-10-02 14:21 GMT

ಬೆಂಗಳೂರು, ಅ.2: ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ 4 ಲಕ್ಷ ಮೌಲ್ಯದ ಗಾಂಜಾ, 3 ಮೊಬೈಲ್, 1 ಬೈಕ್ ಜಪ್ತಿ ಮಾಡಿದ್ದಾರೆ.

ಬಾಬು ಮತ್ತು ಸನೋಜ್ ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಹಾಗೂ ಹರಳೂರಿನಲ್ಲಿ ಇವರಿಬ್ಬರು ನೆಲೆಸಿದ್ದರು ಎಂದು ಸಿಸಿಬಿ ತಿಳಿಸಿದೆ. ಗಾಂಜಾ, ಎಂಡಿಎಂಎ ಹಾಗೂ ಮಾದಕ ಮಾತ್ರೆಯನ್ನು ತಮ್ಮ ವಶದಲ್ಲಿಟ್ಟುಕೊಂಡು ಚಿಕ್ಕ ಚಿಕ್ಕ ಪ್ಯಾಕೆಟ್‌ಗಳನ್ನಾಗಿ ಮಾಡಿ ಪರಿಚಿತ ಗಿರಾಕಿಗಳಿಗೆ ಮಾರಾಟ ಮಾಡುವ ಮೂಲಕ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು.

ಎಚ್‌ಎಸ್‌ಆರ್ ಲೇಔಟ್ ವ್ಯಾಪ್ತಿಯ ಪರಂಗಿಪಾಳ್ಯದ ಪಾದಚಾರಿ ಮಾರ್ಗದ ಬಳಿ ಈ ಇಬ್ಬರು ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಸಂಗ್ರಹಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಬೆಳಕಿಗೆ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News