ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು
Update: 2018-10-02 20:24 IST
ಬೆಂಗಳೂರು, ಅ.2: ಬೈಕ್‌ವೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೃಷ್ಣಾ (36) ಎಂಬಾತ ಮೃತಪಟ್ಟ ಸವಾರ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಬೈಕ್‌ನಲ್ಲಿ ಕೆಂಗೇರಿಯ ರೈಲ್ವೆ ಸೇತುವೆ ಬಳಿಯ ನೈಸ್ ರಸ್ತೆಯಲ್ಲಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ಅವರ ತಲೆಗೆ ತೀವ್ರ ಪೆಟ್ಟಾಗಿ ಅವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅವರ ವಿಳಾಸ ತಿಳಿದುಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಸಂಚಾರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.