ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ
Update: 2018-10-02 20:25 IST
ಬೆಂಗಳೂರು, ಅ.2: ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಡುಗೋಡಿಯ ಬೆಳ್ಳತ್ತೂರಿನ ನಿವಾಸಿ ಕಲ್ಯಾಣಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಪೊಲಿಸರು ತಿಳಿಸಿದ್ದಾರೆ.
ದಂಪತಿ ನಡುವೆ ಯಾವಾಗಲೂ ಕ್ಷುಲ್ಲಕ ವಿಚಾರಗಳಿಗೆ ಜಗಳ ನಡೆಯುತ್ತಿತ್ತು. ಕಲ್ಯಾಣಿ ಅವರು ಪತಿಗೆ ಬುದ್ಧಿ ಹೇಳಿ ಸರಿದಾರಿಗೆ ತರಲು ಪ್ರಯತ್ನಿಸಿದ್ದರು. ಆದರೆ, ಆತ ತನ್ನ ವರ್ತನೆಯನ್ನು ಸರಿಪಡಿಸಿಕೊಂಡಿರಲಿಲ್ಲ. ಇದರಿಂದ ಬೇಸತ್ತು ಕಲ್ಯಾಣಿ ಸೋಮವಾರ ರಾತ್ರಿ ಮನೆಯಲ್ಲೇ ಫ್ಯಾನಿಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಾಡುಗೋಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.