ಬೈಕ್ ಢಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು
Update: 2018-10-02 20:54 IST
ಮೈಸೂರು,ಅ.2: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮಕೃಷ್ಣನಗರದ ಆಂದೋಲನ ವೃತ್ತದಲ್ಲಿ ನಡೆದಿದೆ.
ಮೈಸೂರು ವಿಶ್ವವಿದ್ಯಾನಿಲಯದ ನೌಕರ ಶ್ರೀಕಂಠು(57) ಮೃತ ವ್ಯಕ್ತಿ. ನಿನ್ನೆ ರಾತ್ರಿ ಶ್ರೀಕಂಠು ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಈ ಸಂಬಂಧ ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.