×
Ad

ಹನೂರು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Update: 2018-10-02 21:36 IST

ಹನೂರು,ಅ.2: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಪುಷ್ಪರಾಣಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧಿಜೀಯವರು ಅಹಿಂಸಾ ತತ್ವದ ಮೂಲಕ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಾಹಾನ್ ಚೇತನ. ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಚಳುವಳಿಗಳನ್ನು, ಸತ್ಯಾಗ್ರಹಗಳನ್ನು ನಡೆಸುವುದರ ಮೂಲಕ ಸ್ವಾತಂತ್ರ್ಯದ ಇತಿಹಾಸದಲ್ಲಿ ತಮ್ಮದೇಯಾದ ಇತಿಹಾಸವನ್ನು ಸೃಷ್ಠಿಸಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರುಷೂಕಿಯರಾದ ವೀಣಾ, ಆಶಾ, ಪಾರ್ವತಿ, ಪ್ರೀತಮ್, ಮಹದೇವಪ್ಪ ಹಾಗೂ ಇನ್ನಿತರರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News