×
Ad

ಕಾರ್ಯಕರ್ತರ ಭಾವನೆಗಳನ್ನು ಎಂದೂ ಕಡೆಗಣಿಸಿಲ್ಲ: ಸಚಿವೆ ಜಯಮಾಲ

Update: 2018-10-02 21:46 IST

ಉಡುಪಿ, ಅ.2: ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ಕಡೆಗಣಿಸುವಂತಹ ಕೆಲಸವನ್ನು ನಾನು ಯಾವತ್ತೂ ಮಾಡಿಲ್ಲ. ಪಕ್ಷ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನೆರವೇರಿಸಿಕೊಂಡು ಹೋಗುತ್ತಿದ್ದೇನೆ. ಪಕ್ಷದ ಕಾರ್ಯಕರ್ತರ ನ್ಯಾಯಸಮ್ಮತ ಹಿತಾಸಕ್ತಿಗಾಗಿ ಸದಾ ಬೆಂಬಲಕ್ಕಿದ್ದೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಹೇಳಿದ್ದಾರೆ.

ಬಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದರು. ನನ್ನ ಪಕ್ಷ ನಿಷ್ಠೆಯನ್ನು ಯಾರು ಪ್ರಶ್ನೆ ಮಾಡುವಂತಾಗಬಾರದು ಎಂಬುದರ ಮಟ್ಟಿಗೆ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
 ಭಾರತ್‌ಬಂದ್ ಸಮಯದಲ್ಲಿ ಪಕ್ಷದ ಕಾರ್ಯಕರ್ತರ ವಿರುದ್ಧ ದೌರ್ಜನ್ಯ ನಡೆಸಿದ ಘಟನೆ ಬಗ್ಗೆ ಕ್ಷಣ ಕ್ಷಣದ ಮಾಹಿತಿಯನ್ನು ಪಕ್ಷದ ಜಿಲ್ಲಾ ಮುಖಂಡ ರಿಂದ ಪಡೆದು ಕಾನೂನಿನ ನೆಲೆಯಲ್ಲಿ ನೆರವಿಗೆ ಕ್ರಮ ಕೈಗೊಂಡಿದ್ದೇನೆ. ಈ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬೇಕಾಗಿಲ್ಲ ಎಂದು ಅವರು ತಿಳಿಸಿದರು.

ಪಕ್ಷವನ್ನು ಕಟ್ಟುವ ನಿಟ್ಟಿನಲ್ಲಿ ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡ ಬೇಕು. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿ ಸುವಂತಾಗಬೇಕು. ಬಹಿರಂಗ ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ಅವರು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಉಡುಪಿ ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ನರಸಿಂಹಮೂರ್ತಿ, ಗಣೇಶ್ ನೆರ್ಗಿ, ಯತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News