ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಶಾಸಕ

Update: 2018-10-02 18:10 GMT

 ಮುಂಬೈ, ಅ. 2: ಬಿಜೆಪಿ ಶಾಸಕ ಆಶಿಶ್ ದೇಶ್‌ಮುಖ್ ಅವರು ವಿಧಾನ ಸಭೆಗೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಪಕ್ಷದ ಮತ ಬ್ಯಾಂಕ್ ರಾಜಕಾರಣಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದೇನೆ ಎಂದು ಪ್ರತ್ಯೇಕ ವಿದರ್ಭ ರಾಜ್ಯ ರಚನೆಯನ್ನು ಬೆಂಬಲಿಸುತ್ತಿರುವ ದೇಶ್‌ಮುಖ್ ಅವರು ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ರೈತರು ಹಾಗೂ ಯುವಕರ ಪರಿಸ್ಥಿತಿ ಚಿಂತಾಜನಕವಾಗಿದೆ. ಚುನಾವಣೆಯಲ್ಲಿ ಜಯ ಗಳಿಸುವ ಒಂದೇ ಉದ್ದೇಶದಿಂದ ಕೇಂದ್ರ ಸರಕಾರ ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಹಾಗೂ ದೇಶವನ್ನು ವಿಭಜಿಸುತ್ತಿದೆ ಎಂದು ನಾಗಪುರ ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ದೇಶ್‌ಮುಖ್ ತಿಳಿಸಿದ್ದಾರೆ. ಬಿಜೆಪಿ ಭಾರತದ ಜನರನ್ನು ನಿರ್ಲಕ್ಷಿಸುತ್ತಿರುವುದರಿಂದ, ನಾನು ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದೆ ಎಂದು ಅವರು ಹೇಳಿದ್ದಾರೆ. ಮಂಗಳವಾರ ಸಂಜೆ ದೇಶಮುಖ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News