ಕಲಬುರ್ಗಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಅಗತ್ಯ: ಸಚಿವ ಪ್ರಿಯಾಂಕ್ ಖರ್ಗೆ
Update: 2018-10-03 19:26 IST
ಕಲಬುರ್ಗಿ, ಅ. 3: ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನವನ್ನು ನೀಡಬೇಕೆಂದು ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಕಲಬುರ್ಗಿ ದೊಡ್ಡ ಜಿಲ್ಲೆಯಾಗಿದ್ದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮತ್ತೊಂದು ಸಚಿವ ಸ್ಥಾನದ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬುಧವಾರ ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಶಾಸಕರಾದ ಅಜಯ್ ಸಿಂಗ್, ಡಾ.ಉಮೇಶ್ ಜಾಧವ್ ಇಬ್ಬರು ಯುವ ಶಾಸಕರಿದ್ದು, ಎಂ.ವೈ.ಪಾಟೀಲ್ ಅವರಂತಹ ಅನುಭವಸ್ಥರೂ ಇದ್ದಾರೆ. ಆ ಮೂವರ ಪೈಕಿ ಯಾರಾದರೂ ಒಬ್ಬರಿಗೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ನೀಡಿದರೆ ಒಳ್ಳೆಯದು. ಈ ಸಂಬಂಧ ಈಗಾಗಲೇ ಹೈಕಮಾಂಡ್‌ಗೆ ಮನವಿ ಮಾಡಿದ್ದು, ಜಿಲ್ಲೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.