×
Ad

ಬೆಂಗಳೂರು: ಚಾಕು ಇರಿದು ಪರಾರಿ

Update: 2018-10-03 19:36 IST

ಬೆಂಗಳೂರು, ಅ.3: ವ್ಯಕ್ತಿಯೊಬ್ಬನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ಇಲ್ಲಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಂದಿನಿ ಲೇಔಟ್ 4ನೆ ಮುಖ್ಯರಸ್ತೆ, 4ನೇ ಕ್ರಾಸ್, ಮುನೇಶ್ವರ ನಗರ ನಿವಾಸಿ ಶ್ರೀನಿವಾಸ್ ಇರಿತಕ್ಕೆ ಒಳಗಾದವರು ಎಂದು ತಿಳಿದುಬಂದಿದೆ. ಶ್ರೀನಿವಾಸ್ ಅವರ ಮನೆಯಲ್ಲಿ ಇತ್ತೀಚೆಗೆ ಹಣ ಕಳವು ಮಾಡಲಾಗಿತ್ತು. ಈ ಬಗ್ಗೆ ಮಂಗಳವಾರ ಮನೆಯ ಬಳಿ ಅನುಮಾನಾಸ್ಪದವಾಗಿ ಸುತ್ತಾಡುತಿದ್ದ ಯುವಕನೊಬ್ಬನನ್ನು ಶ್ರೀನಿವಾಸ್ ಅವರ ಪತ್ನಿ ಶಶಿಕಲಾ ಪ್ರಶ್ನಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕ ಶಶಿಕಲಾ ಅವರೊಂದಿಗೆ ಜಗಳ ಮಾಡಿದ್ದಾನೆ. ವಿಷಯ ತಿಳಿದು ಅಲ್ಲಿಗೆ ಬಂದ ಶ್ರೀನಿವಾಸ್ ಅವರೊಂದಿಗೂ ಜಗಳವಾಡಿದ ಯುವಕ ಚಾಕುನಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಶ್ರೀನಿವಾಸ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಈ ಬಗ್ಗೆ ಶಶಿಕಲಾ ಅವರು ನೀಡಿದ ದೂರಿನ್ವಯ ನಂದಿನಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News