ಗಂಗಾನದಿಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
ಪಾಟ್ನಾ,ಅ.3: ದುಷ್ಕರ್ಮಿಗಳಿಬ್ಬರು ಗಂಗಾನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ಸೋಮವಾರ ಇಲ್ಲಿ ನಡೆದಿದೆ. ಆರೋಪಿಗಳು ಘಟನೆಯ ವೀಡಿಯೊ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದು,ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಶಿವಪೂಜನ್ ಮಹ್ತೋ ಮತ್ತು ವಿಶಾಲ್ ಮಹಿಳೆಯನ್ನು ನದಿಯಿಂದ ಹೊರಕ್ಕೆಳೆದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು.
ಗಂಗೆಯ ಪಾವಿತ್ರ್ಯವನ್ನು ಪರಿಗಣಿಸಿ ಮತ್ತು ತನ್ನನ್ನು ಬಿಟ್ಟುಬಿಡಿ ಎಂದು ಮಹಿಳೆ ಆರೋಪಿಗಳನ್ನು ಬೇಡಿಕೊಳ್ಳುತ್ತಿರುವ ದೃಶ್ಯವೂ ವೀಡಿಯೊದಲ್ಲಿ ದಾಖಲಾಗಿದೆ.
ಈ ಬಗ್ಗೆ ಮಹಿಳೆ ಯಾವುದೇ ದೂರನ್ನು ಸಲ್ಲಿಸಿಲ್ಲವಾದರೂ ವೀಡಿಯೊವನ್ನು ಗಮನಿಸಿದ ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣವನ್ನು ದಾಖಲಿಸಿ ಕೊಂಡಿದ್ದಾರೆ.
ವೃತ್ತಿಯಲ್ಲಿ ಚಾಲಕನಾಗಿರುವ ಮಹತೋ ಪಾಟ್ನಾದಿಂದ ಬಾಢ್‌ಗೆ ಪ್ರಯಾಣಿಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದು,ಆತ ಆಮಿಷವೊಡ್ಡಿ ತನ್ನೊಂದಿಗೆ ಕರೆದೊಯ್ಯುತ್ತಿದ್ದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ರಕ್ಷಿಸಲಾಗಿದೆ.