ರವಿವಾರ ಭಾರೀ ಮಳೆಯಾಗುವ ಸಾಧ್ಯತೆ: ಕೇರಳದ 3 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಣೆ

Update: 2018-10-03 14:57 GMT

ತಿರುವನಂತಪುರಂ, ಅ.3: ಅಕ್ಟೋಬರ್ 7ರಂದು ಕೇರಳದ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಇಡುಕ್ಕಿ, ತ್ರಿಶೂರ್  ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

“ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ಚಂಡಮಾರುತದ ಅಪಾಯವಿದ್ದು, ಈಗಾಗಲೇ ಎಚ್ಚರಿಕೆ ಘೋಷಿಸಲಾಗಿದೆ” ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News