×
Ad

ಮೀನುಗಾರರಿಗೆ ಮುನ್ನೆಚ್ಚರಿಕೆ

Update: 2018-10-03 20:52 IST

ಮಂಗಳೂರು, ಅ.3: ಹವಾಮಾನ ಇಲಾಖೆಯು ನೀಡಿದ ಹವಾಮಾನ ಮುನ್ಸೂಚನೆಯಂತೆ ಅ.6ರಿಂದ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವವಿರುವುದರಿಂದ ಎಲ್ಲ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಬಾರದು. ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕೆ ದೋಣಿಗಳು ಅ.5ರೊಳಗೆ ದಡ ಸೇರುವಂತೆ ಈ ಮೂಲಕ ಎಲ್ಲ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ದ.ಕ. ಮೀನುಗಾರಿಕೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News