ಕೋಲ್ಕತಾ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ: ರೋಗಿಗಳ ತೆರವು

Update: 2018-10-03 18:09 GMT

ರಾಜ್ಯ ಸ್ವಾಮಿತ್ವದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡಿಸ್ಪೆನ್ಸರಿಯಲ್ಲಿ ಬುಧವಾರ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, 250ಕ್ಕೂ ಅಧಿಕ ರೋಗಿಗಳನ್ನು ತೆರವುಗೊಳಿಸಲಾಗಿದೆ ಹಾಗೂ ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಮಹಡಿಯಲ್ಲಿರುವ ಡಿಸ್ಪೆನ್ಸರಿಯಲ್ಲಿ ಬೆಳಗ್ಗೆ 8 ಗಂಟೆಗೆ ಕಾಣಿಸಿಕೊಂಡ ಬೆಂಕಿಯಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಯ ಮುಖ್ಯ ಕಟ್ಟಡದ ನೆಲ ಮಹಡಿಯಲ್ಲಿರುವ ಡಿಸ್ಪೆನ್ಸರಿಯಲ್ಲಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor