ಮುಖ್ಯ ನ್ಯಾಯಾಧೀಶರಾಗಿ ಗೊಗೊಯಿ ಪ್ರಮಾಣ

Update: 2018-10-03 18:13 GMT

ನ್ಯಾಯಾಧೀಶ ರಂಜನ್ ಗೊಗೊಯಿ ಬುಧವಾರದಂದು ಭಾರತದ 46ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಗೊಗೊಯಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾಯಾಧೀಶ ದೀಪಕ್ ಮಿಶ್ರಾ ಅವರಿಂದ ಅಧಿಕಾರ ಪಡೆದುಕೊಂಡ ಗೊಗೊಯಿ, ಈಶಾನ್ಯ ರಾಜ್ಯದಿಂದ ನೇಮಕಗೊಂಡ ಮೊದಲ ಸಿಜೆಐ ಎಂಬ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಇವರು 2019ರ ನವಂಬರ್ 17ರ ವರೆಗೆ ಹದಿಮೂರು ತಿಂಗಳ ಕಾಲ ಭಾರತದ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor