ರಾಜಸ್ಥಾನ: ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಪ್ರಕಾಶ್ ಜಾವಡೇಕರ್ ನಿಯುಕ್ತಿ

Update: 2018-10-04 03:52 GMT

ಹೊಸದಿಲ್ಲಿ, ಅ.4: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ರಾಜಸ್ಥಾನ ವಿಧಾನಸಭಾ ಉಸ್ತುವಾರಿಯನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿಯುಕ್ತಿಗೊಳಿಸಿದ್ದಾರೆ.

ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರನ್ನು ತೆಲಂಗಾಣ ವಿಧಾನಸಭಾ ಚುನಾವಣೆಯ ಉಸ್ತುವಾರಿಯಾಗಿ ಹಾಗೂಧರ್ಮೇಂದ್ರ ಪ್ರಧಾನ್ ಅವರನ್ನು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಉಸ್ತುವಾರಿಯನ್ನಾಗಿ ನಿಯೋಜಿಸಿ ಅಮಿತ್ ಶಾ ಆದೇಶ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News