ಉಡುಪಿ: ವೃದ್ಧ ನಾಪತ್ತೆ
Update: 2018-10-04 21:14 IST
ಉಡುಪಿ, ಅ. 4: ಸೂರ್ಯನಾರಾಯಣ ಅಡಿಗ (78) ಎಂಬ ವೃದ್ಧರು ಕಳೆದ ಫೆ. 6ರಂದು ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಕಮಲಮ್ಮ ಕಲ್ಯಾಣ ಮಂಟಪದಿಂದ ನಾಪತ್ತೆಯಾಗಿದ್ದು, ಈವರೆಗೆ ಪತ್ತೆಯಾಗಿಲ್ಲ.
ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡನೆಯ ಮುಖ, ಕನ್ನಡ, ತೆಲುಗು, ಹಿಂದಿ ಭಾಷೆ ತಿಳಿದಿದ್ದಾರೆ. ಇವರು ಪತ್ತೆಯಾದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಉಡುಪಿ(0820-2526444) ಅಥವಾ ಪೊಲೀಸ್ ವೃತ್ತ ನಿರೀಕ್ಷಕರು, ಕುಂದಾಪುರ ವೃತ್ತ(08254-230880) ಅಥವಾ ಪೊಲೀಸ್ ಉಪ ನಿರೀಕ್ಷಕರು, ಕುಂದಾಪುರ ಪೊಲೀಸ್ ಠಾಣೆ(08254-230338) ಗೆ ಮಾಹಿತಿ ನೀಡುವಂತೆ ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.