×
Ad

ಅ.6: ಉಡುಪಿ ಸರ್ವಕಾಲೇಜು ವಿದ್ಯಾರ್ಥಿ ಶಕ್ತಿ ಉದ್ಘಾಟನೆ

Update: 2018-10-04 22:11 IST

ಉಡುಪಿ, ಅ.4: ಕರ್ನಾಟಕದ ರಾಮ ಸೇನೆಯ ಅಂಗಸಂಸ್ಥೆಯಾದ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿಯ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಚುನಾವಣೆ ಅ.6ರ  ಬೆಳಗ್ಗೆ 10 ಗಂಟೆಗೆ ಕುಂಜಿಬೆಟ್ಟಿನ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಗೌತಮ್ ಕೆ.ಬಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಘವನ್ನು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿರುವರು. ರಾಮ್‌ಸೇನಾ ಕರ್ನಾಟಕದ ಸ್ಥಾಪಕ ಪ್ರಸಾದ್ ಅತ್ತಾವರ ಅಧ್ಯಕ್ಷತೆ ವಹಿಸುವರು. ಶಾಸಕ ರಘುಪತಿ ಭಟ್, ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರರು ಪಾಲ್ಗೊಳ್ಳುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಗೌತಮ್ ಜಿ., ರಂಜಿತ್ ಶೇರಿಗಾರ್, ಅಂಕಿತ್ ಶೆಟ್ಟಿ, ನಿತಿನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News