ಮೈಸೂರು: ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಮೃತ್ಯು
Update: 2018-10-04 22:14 IST
ಮೈಸೂರು,ಅ.4: ಸೆಂಟರಿಂಗ್ ಕೆಲಸ ಮಾಡುವ ಕೂಲಿ ಕಾರ್ಮಿಕರೋರ್ವರು ಕಟ್ಟಡ ಕೆಲಸ ನಡೆಯುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರಿನ ದೇವರಾಜ ಮೊಹಲ್ಲಾದ ಬೋಟಿ ಬಜಾರ್ ನಲ್ಲಿ ನಡೆದಿದೆ.
ಮೃತರನ್ನು ಮೈಸೂರು ತಾಲೂಕು ಚಿಕ್ಕಳ್ಳಿ ಗ್ರಾಮದ ಕೃಷ್ಣ (30)ಎಂದು ಗುರುತಿಸಲಾಗಿದೆ. ಕಟ್ಟಡದ ಎರಡನೇ ಅಂತಸ್ತಿನ ಕೆಲಸ ಮಾಡುವಾಗ ಅವಘಡ ಸಂಭವಿಸಿದ್ದು, ಗಾಯಗೊಂಡ ಕೃಷ್ಣ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಸಾವನ್ನಪ್ಪಿದ್ದಾರೆ. ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.