ಹೃದಯಾಘಾತ: ಪೊಲೀಸ್ ಕಾನ್ಸ್ ಟೇಬಲ್ ಸಾವು

Update: 2018-10-04 16:44 GMT

ಮೈಸೂರು,ಅ.4: ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕುವೆಂಪುನಗರದಲ್ಲಿ ನಡೆದಿದೆ.

ಮೃತರನ್ನು ನಾಗೇಂದ್ರ (29) ಎಂದು ಗುರುತಿಸಲಾಗಿದ್ದು, ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಕರ್ತವ್ಯದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದರು. ಕೂಡಲೇ ಸಹೋದ್ಯೋಗಿಗಳು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News