ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಪೃಥ್ವಿ ಶಾ ಶತಕ

Update: 2018-10-04 18:28 GMT

ಮುಂಬೈನ ಕಿರಿಯ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ತನ್ನ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ ಮೊದಲ ಅತ್ಯಂತ ಕಿರಿಯ ಕ್ರಿಕೆಟಿಗನೆಂಬ ಕೀರ್ತಿಗೆ ಭಾಜನರಾದರು. ತನ್ನ ಪಾದಾರ್ಪಣೆ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿ ತನ್ನ ಆಗಮನವನ್ನು ವಿಶ್ವಕ್ಕೆ ಸಾರಿದ ಶಾ ಅವರು ಚೇತೇಶ್ವರ ಪೂಜಾರ ಅವರೊಂದಿಗೆ ದ್ವಿಶತಕ ಜೊತೆಯಾಟದಲ್ಲಿ ಭಾಗಿಯಾಗಿ ಮೊದಲ ದಿನದಾಟದ ಗೌರವಕ್ಕೆ ಪಾತ್ರರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor