×
Ad

ಬೆಳ್ಳಿ ಪದಕ ವಿಜೇತ ವಿಜಯ ಕಾಂಚನ್‌ಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

Update: 2018-10-05 20:09 IST

ಮಂಗಳೂರು, ಅ. 5: ದುಬೈನಲ್ಲಿ ಇತ್ತೀಚೆಗೆ ನಡೆದ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 105 ಕೆ.ಜಿ. ತೂಕದ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದ ಮೂಡುಬಿದಿರೆಯ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ವಿಜಯ ಕಾಂಚನ್ ಅವರನ್ನು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್, ಸಂಚಾರ ಪೊಲೀಸ್ ಅಧಿಕಾರಿಗಳಾದ ಅಮಾನುಲ್ಲಾ ಎ., ಎಚ್. ಶಿವಪ್ರಕಾಶ್, ಕೆ.ಎಚ್.ಯೂಸುಫ್, ಕೆನರಾ ಬಸ್ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News