×
Ad

ವರ್ತೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ

Update: 2018-10-05 21:55 IST

ಬೆಂಗಳೂರು, ಅ.5: ನಗರದ ವರ್ತೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆಯ ಆರ್ಭಟ ಶುರುವಾಗಿದ್ದು, ಸಾರ್ವಜನಿಕರು ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.

ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವರ್ತೂರು ಕೆರೆಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದ್ದು, ನೀರು ರಭಸವಾಗಿ ಹರಿಯುತ್ತಿರುವುದರಿಂದ ಭಾರಿ ಪ್ರಮಾಣದಲ್ಲಿ ನೊರೆ ಶೇಖರಣೆಯಾಗುತ್ತಿದೆ. ಈ ನೊರೆ ಗಾಳಿಯಲ್ಲಿ ತೇಲಾಡುತ್ತಾ ಸುತ್ತಮುತ್ತಲ ಜನತೆ ಸಮಸ್ಯೆಯನ್ನು ಎದುರಿಸುವಂತಾಗಿದೆ.

ಸಾರ್ವಜನಿಕರ ಆಕ್ರೋಶ: ಪ್ರತಿವರ್ಷದ ಮಳೆಗಾಲದಲ್ಲಿ ವರ್ತೂರು ಕೆರೆಯಲ್ಲಿ ನೊರೆ ಸಮಸ್ಯೆ ಸಾಮಾನ್ಯವಾಗಿದೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇವರ ನಿರ್ಲಕ್ಷದಿಂದಾಗಿ ಇಲ್ಲಿ ವಾಸಿಸುತ್ತಿರುವ ಸಾವಿರಾರು ಮಂದಿ ಸಮಸ್ಯೆ ಎದುರಿಸುವಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News