ನಮ್ಮ ಮೆಟ್ರೋ ಎರಡನೇ ಹಂತ 2020 ಕ್ಕೆ ಪೂರ್ಣ

Update: 2018-10-05 16:29 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.5: ನಮ್ಮ ಮೆಟ್ರೊ 2ನೇ ಹಂತದ ಯಲಚೇನಹಳ್ಳಿ-ಅಂಜನಾಪುರ ಟೌನ್‌ಶಿಪ್ ಹಾಗೂ ನಾಯಂಡಹಳ್ಳಿ-ಕೆಂಗೇರಿ ಮಾರ್ಗಗಳನ್ನು ಸಂಚಾರ ಮುಕ್ತಗೊಳಿಸುವ ಗುರಿಯನ್ನು ಬಿಎಂಆರ್‌ಸಿಎಲ್ 2019 ರಿಂದ 2020ಕ್ಕೆ ವಿಸ್ತಾರ ಮಾಡಿದೆ.

ಈ ಸಂಬಂಧ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಮಾಹಿತಿ ನೀಡಿದ್ದು, ಮೊದಲಿಗೆ ಯಲಚೇನಹಳ್ಳಿ-ಅಂಜನಾಪುರ ಟೌನ್‌ಶಿಪ್ ಮಾರ್ಗ ಪೂರ್ಣಗೊಳ್ಳಲಿದ್ದು, ನಂತರದಲ್ಲಿ ನಾಯಂಡಹಳ್ಳಿ-ಕೆಂಗೇರಿ ಮಾರ್ಗದ ನಿರ್ಮಾಣ ಮುಗಿಯಲಿದೆ ಎಂದು ಹೇಳಿದರು. ಎರಡೂ ಮಾರ್ಗಗಳು ಸರಿಯಾದ ಸಮಯಕ್ಕೆ ಪೂರ್ಣಗೊಂಡರೆ ಮುಂದಿನ 2020ರ ವೇಳೆಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News