4 ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ

Update: 2018-10-06 10:11 GMT

ಹೊಸ ದಿಲ್ಲಿ, ಅ.6: ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ಛತ್ತೀಸ್ ಗಡ ರಾಜ್ಯಗಳ ವಿಧಾನ ಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಆಯುಕ್ತ ಒ.ಪಿ. ರಾವತ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. 

ಮಧ್ಯಪ್ರದೇಶ ಮತ್ತು ಮಿಜೋರಾಂನಲ್ಲಿ ನ.28ರಂದು ,  ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಡಿ.7ರಂದು,  ಛತ್ತೀಸ್ ಗಡದಲ್ಲಿ  ನ.12 ಮತ್ತು 20ರಂದು 2 ಹಂತದಲ್ಲಿ ಚುನಾವಣೆ ನಡೆಯಲಿದೆ .  

ಮಂಡ್ಯ, ಬಳ್ಳಾರಿ, ಶಿವ ಮೊಗ್ಗ ಲೋಕಸಭಾ  ಕ್ಷೇತ್ರ ಗಳಿಗೆ  ನ.3ರಂದು  ಮತ್ತು ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನ.12ರಂದು ಉಪ ಚುನಾವಣೆ ನಡೆಯಲಿದೆ. 

ಡಿ.11ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಡಿಸೆಂಬರ್ 15ರೊಳಗೆ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News