5 ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ

Update: 2018-10-06 13:25 GMT

ಹೊಸ ದಿಲ್ಲಿ, ಅ.6: ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್ ಗಡ ರಾಜ್ಯಗಳ ವಿಧಾನ ಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಆಯುಕ್ತ ಒ.ಪಿ. ರಾವತ್ ಶನಿವಾರ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. 

ಮಧ್ಯಪ್ರದೇಶ ಮತ್ತು ಮಿಜೋರಾಂನಲ್ಲಿ ನ.28ರಂದು ,  ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಡಿ.7ರಂದು ಒಂದೇ ಹಂತದಲ್ಲಿ,  ಛತ್ತೀಸ್ ಗಡದಲ್ಲಿ  ನ.12 ಮತ್ತು 20ರಂದು 2 ಹಂತದಲ್ಲಿ ಚುನಾವಣೆ ನಡೆಯಲಿದೆ .  

ಮಂಡ್ಯ, ಬಳ್ಳಾರಿ, ಶಿವಮೊಗ್ಗ ಲೋಕಸಭಾ  ಕ್ಷೇತ್ರ ಗಳಿಗೆ ಮತ್ತು ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಉಪ ಚುನಾವಣೆ ನಡೆಯಲಿದೆ. ನ.6ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News